103. Al Asr

103. ಅಲ್ ಅಸ್ರ್ (ಕಾಲ)

 ವಚನಗಳು – 3 , ಮಕ್ಕಃ

ಅಲ್ಲಾಹನ ಹೆಸರಿಂದ – ಅವನು ಅಪಾರ ದಯಾಳು, ಕರುಣಾಮಯಿ.

1. ಕಾಲದಾಣೆ.

2. ಮನುಷ್ಯನು ಖಂಡಿತ ನಷ್ಟದಲ್ಲಿದ್ದಾನೆ.

3. ನಂಬಿಕೆ ಇರಿಸಿದ, ಒಳ್ಳೆಯ ಕೆಲಸಗಳನ್ನು ಮಾಡಿದ ಮತ್ತು ಪರಸ್ಪರರಿಗೆ ಸತ್ಯವನ್ನು ಬೋಧಿಸಿದ ಮತ್ತು ಸಹನೆಯನ್ನು ಬೋಧಿಸಿದವರ ಹೊರತು.